ಚಾಮರಾಜನಗರ: ನರ್ಸಿಂಗ್ ಕಾಲೇಜು ಆವರಣದಲ್ಲಿ ಹೆಜ್ಜೇನು ದಾಳಿ ನಡೆಸಿದ್ದು, ಪರಿಣಾಮ ಸಿಬ್ಬಂದಿಗಳು ಸೇರಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಜೆ.ಎಸ್.ಎಸ್ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.
ಊಟದ ಸಮಯದಲ್ಲಿ ಕಾಲೇಜು ಆವರಣದಲ್ಲಿ ಹೆಜ್ಜೇನು ದಾಳಿ ನಡೆಸಿದೆ.ಹೆಜ್ಜೇನು ದಾಳಿಯಿಂದ ಭಯಭೀತರಾದ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ಪರದಾಡಿದ್ದಾರೆ.ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ ಜೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.