ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ ನಾಲ್ಕು ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ ಬಿ.ಶ್ರೀರಾಮುಲು

ಚಾಮರಾಜನಗರ (ಅ.08):ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ 4 ತಿಂಗಳಲ್ಲೇ ಜನರ ವಿಶ್ವಾಸ ಕಳೆದುಕೊಂಡಿದೆ. ಈಗ ಕಳಪೆ ಅಧಿಕಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಆದೇಶಕ್ಕೆ ಮೊದಲೇ ಕಾವೇರಿ ನೀರು ಬಿಟ್ಟು ನಮ್ಮ ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದಾರೆ, ಕಾನೂನು ವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ಹದಗೆಟ್ಟಿದೆ. ಕೇವಲ ಒಂದು ಸಮುದಾಯವನ್ನು ಓಲೈಸುವ ಮೂಲಕ ಸರ್ಕಾರ ರಾಜಕಾರಣಕ್ಕೆ ಮುಂದಾಗಿದೆ ಎಂದು ಅವರು ಆರೋಪಿಸಿದರು.

ಶಿವಮೊಗ್ಗ ಗಲಭೆಯನ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು, ಕೇವಲ ಪೊಲೀಸ್ ತನಿಖೆಯಿಂದ ನಿಷ್ಪಕ್ಷಪಾತ ವರದಿ ಬರಲ್ಲ. ಉನ್ನತ ಮಟ್ಟದ ತನಿಖೆ ನಡೆಯಬೇಕು, ಗೃಹ ಸಚಿವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಕೋಮು ಸಂಘರ್ಷ ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಿವಮೊಗ್ಗ ಘಟನೆಯ ಹೊಣೆಯನ್ನು ನೇರವಾಗಿ ಸಿಎಂ ಹಾಗೂ ಡಿಸಿಎಂ ಹೊರಬೇಕು ಎಂದು ಅವರು ಕಿಡಿಕಾರಿದರು.

ಕಾವೇರಿ ವಿಚಾರದಲ್ಲಿ ಡಿಸಿಎಂ ಡಿಕೆಶಿ ತಮಿಳುನಾಡು ಸರ್ಕಾರವನ್ನು ಸಂತೈಸಲು ನಮ್ಮ ಜನರನ್ನು ಕಡೆಗಾಣಿಸಿದ್ದಾರೆ. ಹೀಗಾಗಿ ನಾವು ಮೈತ್ರಿ ಮಾಡಿಕೊಂಡಿದ್ದೇವೆ ಎಲ್ಲರ ಸಮ್ಮುಖದಲ್ಲಿ ಕೂತು ಮಾತನಾಡಲಿದ್ದೇವೆ. ಮೈತ್ರಿ ವಿಚಾರವಿನ್ನೂ ಮಾತುಕತೆ ಹಂತದಲ್ಲಿದೆ. ನಮ್ಮ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

Latest Indian news

Popular Stories