ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿಯ ರೀಲ್ಸ್, ಮನನೊಂದು ಪತಿ ಆತ್ಮಹತ್ಯೆ

ಚಾಮರಾಜನಗರ: ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿ ರೀಲ್ಸ್ ಮಾಡಿದ್ದಕ್ಕೆ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ.ಜಿ‌.ಪಾಳ್ಯ ಗ್ರಾಮದ ಕುಮಾರ್ (33) ನೇಣಿಗೆ ಶರಣಾದ ಪತಿ.

ಸೋದರ ಮಾವ, ಸಹೋದರಿ ಜೊತೆಗೆ ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿ ರೂಪಾ ರೀಲ್ಸ್ ಮಾಡಿದ್ದರು. ಇದೇ ವಿಚಾರಕ್ಕೆ ದಂಪತಿ ನಡುವೆ ಮಾತಿನ ಚಕಮಕಿ ಉಂಟಾಗಿತ್ತು.

ಪತ್ನಿಯ ರೀಲ್ಸ್ ನೋಡಿ ಗೆಳೆಯರು ರೇಗಿಸುತ್ತಿದ್ದರು. ಇದರಿಂದ ಮನನೊಂದ ಪತಿ ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಮಾರ್ ಸಹೋದರ ಮಹದೇವ ಸ್ವಾಮಿ ಪೊಲೀಸರಿಗೆ ದೂರು ನೀಡಿದ್ದಾರೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Latest Indian news

Popular Stories