Chikkaballapur

ನಿಯಂತ್ರಣತಪ್ಪಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಬೆಂಕಿ: ಚಾಲಕ ಸಜೀವದಹನ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣತಪ್ಪಿದ ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಚಾಲಕ ಸಜೀವವಾಗಿ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ನಡೆದಿದೆ.

ಇಬ್ರಾಹಿಂ (48) ಮೃತ ದುರ್ದೈವಿ. ವ್ಯಾಪಾರ ಮುಗಿಸಿಕೊಂಡು ಒಮಿನಿ ಕಾರಿನಲ್ಲಿ ತೆರಳುತ್ತಿದ್ದರು.

ಈ ವೇಳೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಸಮೇತ ಚಾಲಕ ಸುಟ್ಟು ಕರಕಲಾಗಿದ್ದಾರೆ.

ಮೃತದೇಹವನ್ನು ಚಿಂತಾಮಣಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button