ಅಕ್ರಮ ನಡೆಯದಂತೆ ಸಿಸಿ ಕ್ಯಾಮೆರಾ ಕಣ್ಗಾವಲು: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಟ್ಟೆಚ್ಚರ,

ಚಿಕ್ಕಬಳ್ಳಾಪುರ ಮಾರ್ಚ್ 25: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು (ಮಾ.25) ಆರಂಭಗಿದೆ. ಜಿಲ್ಲಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ ಈ ಬಾರಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಿದ್ದು, ಯಾವುದೇ ಅಕ್ರಮ ನಡೆಯದಂತೆ ಎಚ್ಚರ ವಹಿಸಲಾಗಿದೆ.ಜಿಲ್ಲಾದ್ಯಂತ ಒಟ್ಟು 302 ಶಾಲೆಯ 15,993 ವಿದ್ಯಾರ್ಥಿಗಳು ಪ್ರಪ್ರಥಮವಾಗಿ ಪರೀಕ್ಷೆ ಬರೆಯುತ್ತಿದ್ದು, 492 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 16,485 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

302 ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾದ್ಯಂತ 52 ಹರಿಹಾಳೆ ಕೇಂದ್ರಗಳನ್ನು ತೆರೆಯಲಾಗಿದೆ. ವಿಶೇಷ ಎಂದರೆ ಈ ಬಾರಿ ಹಿಂದಿನಂತೆ ಖಾಸಗಿ ಶಾಲೆ ಮಕ್ಕಳಿಗೆ ಪ್ರತ್ಯೇಕ ಪರೀಕ್ಷಾ ಕೇಂದ್ರ ವ್ಯವಸ್ಥೆಯಿಲ್ಲ. ಸರಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳ ಜತೆಯೇ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಸಿಸಿ ಕ್ಯಾಮೆರಾ ಕಣ್ಗಾವಲು:ಜಿಲ್ಲೆಯ 52 ಪರೀಕ್ಷೆ ಕೇಂದ್ರಗಳಲ್ಲೂ ಮೂಲ ಸೌಕರ್ಯಗಳ ಜತೆಗೆ ಸಿಸಿ ಕ್ಯಾಮೆರಾ ಕಣ್ಗಾವಲು ಇರಲಿದೆ.

ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂಮಧ್ಯದಲ್ಲಿ ಅಡಚಣೆಯಾಗದಂತೆ ಕ್ರಮ ವಹಿಸಬೇಕು. ಜಿಲ್ಲಾ ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆಯಲ್ಲಿ ಸಿಸಿ ಕ್ಯಾಮೆರಾ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗಿದೆ. ಇಲ್ಲೇ ಇರುವ ಪರೀಕ್ಷಾ ಕೇಂದ್ರಗಳಲ್ಲೂ ತಾತ್ಕಾಲಿಕವಾಗಿ ಸಿಸಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಹೇಗೆ ಪರೀಕ್ಷೆ ನಡೆಯುತ್ತಿದೆ ಎಂಬುದನ್ನು ಸೂಕ್ಷ್ಮವಾಗಿ ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದೆ.

ಅಲ್ಲದೇ ಯಾವುದೇ ಜೆರಾಕ್ಸ್ ಅಂಗಡಿಗಳು ತೆರೆಯದಂತೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರೋಗ್ಯ ಸೇವೆಗೆ, ಸಾರಿಗೆ ವ್ಯವಸ್ಥೆ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ನಿರಂತರ ವಿದ್ಯುತ್‌ಗೆ ಸೂಚನೆ:ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವವೇಳೆ ಎಲ್ಲೆಡೆ ಸಿಸಿಕ್ಯಾಮೆರಾ ಅಳವಡಿಸಲಾಗಿದೆ.

Latest Indian news

Popular Stories