ಕೆರೆಗೆ ಉರುಳಿಬಿದ್ದ ಕಾರು, ಬೆಂಗಳೂರಿನ ನಾಲ್ವರು ಯುವಕರು ಮೃತ್ಯು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಶನಿವಾರ ರಾತ್ರಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಅಮಾನಿಗೋಪಾಲಕೃಷ್ಣ ಕೆರೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಬಾಗೇಪಲ್ಲಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ.

ಕೆಎ 03 ಎಂಟಿ 0761 ಕಾರಿನಲ್ಲಿದ್ದ ನಾಲ್ವರು ಯುವಕರು ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories