ಲೋಕಸಭಾ ಚುನಾವಣೆ ನಂತರ ಸರ್ಕಾರ ಪತನ ಬರೀ ಕನಸು: ಸಿದ್ದರಾಮಯ್ಯ ಗ್ಯಾರಂಟಿ

ಚಿಕ್ಕಬಳ್ಳಾಪುರ/ಬಾಗೇಪಲ್ಲಿ (ಏ.19): ಲೋಕಸಭಾ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ ಎಂದು ಮಾಜಿಪ್ರಧಾನಿಎಚ್.ಡಿ.ದೇವೇಗೌಡ ಹಾಗೂ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷರಾಮಯ್ಯ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಗುರುವಾರ ಮಾತನಾಡಿ, ಲೋಕಸಭಾ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ ಎಂದು ದೇವೇಗೌಡ ಹಾಗೂ ಬಿಜೆಪಿಯವರು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 139 ಸ್ಥಾನಗಳಲ್ಲಿ ಗೆದ್ದಿದ್ದು, ಬಿಜೆಪಿ 66 ಹಾಗೂ ಜೆಡಿಎಸ್ 19 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. ಆದರೂ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಹಿಂದೆ ದೇವೇಗೌಡರು ಕೋಮುವಾದಿಗಳ ಜೊತೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ, ಮುಂದಿನ ಜನ್ಮ ಇದ್ದರೆ ನಾನು ಮುಸ್ಲಿಂ ಆಗಿ ಹುಟ್ಟುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ತಮ್ಮ ರಾಜಕೀಯ ಮತ್ತು ಜೆಡಿಎಸ್‌ ಪಕದ ಉಳಿವಿಗಾಗಿ ಅದೇ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿಕೊಂಡು ಕೇವಲ 3 ಸ್ಥಾನಗಳನ್ನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ ಟೀಂ ಎಂದು ಕರೆದಿದ್ದರು.

Latest Indian news

Popular Stories