ಚಿಕ್ಕಮಗಳೂರಿನಲ್ಲಿ ವ್ಯಕ್ತಿಗೆ ಮಂಗನಕಾಯಿಲೆ ದೃಢ: ಮತ್ತೆ ಜನರಿಗೆ ಹೆಚ್ಚಿದ ಆತಂಕ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಈ ವರ್ಷದ ಮೊದಲ ಮಂಗನಕಾಯಿಲೆ ಪ್ರಕರಣ ಪತ್ತೆಯಾಗಿದೆ.

ಜಿಲ್ಲೆಯ ಬಾಳೆಹೊನ್ನೂರು ಮೂಲದ ವ್ಯಕ್ತಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಎನ್‌ ಆರ್‌ ಪುರ ತಾಲೂಕಿನ ಕೊಪ್ಪದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಮಂಗಬಕಾಯಿಲೆ ಇರುವುದು ಪತ್ತೆಯಾಗಿದೆ.

ಆತನಿಗೆ ತುಂಬಾ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಟಿಕ್ಸ್‌ ಪರೀಕ್ಷೆಗೆ ಆರೋಗ್ಯ ಇಲಾಖೆ ಕಳುಹಿಸಲಾಯಿತು. ನಂತರ ಪಾಸಿಟಿವ್‌ ಬಂದಿದೆ.

ಹೀಗಾಗಿ ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಶುರುವಾಗಿದೆ. ಇದರಿಂದ ಆರೋಗ್ಯ ಇಲಾಖೆ ಹೈ ಅಲರ್ಟ್‌ ಘೊಷಿಸಲಾಗಿದೆ. ಸೋಂಕಿತ ವ್ಯಕ್ತಿ ಇದ್ದ ಸ್ಥಳ, ಸಂಪರ್ಕದಲ್ಲಿದ್ದ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗಿದೆ.

Latest Indian news

Popular Stories

error: Content is protected !!