ಚಿಕ್ಕಮಗಳೂರು: ಲಾರಿ -ಬೈಕ್​ ಮುಖಾಮುಖಿ ಡಿಕ್ಕಿ; ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ಲಾರಿ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೈಕ್​ನಲ್ಲಿದ್ದ ವಿಶ್ವಾಸ್(24), ದೀಪಿಕಾ(22) ಮೃತ ರ್ದುದೈವಿಗಳು.

ತರೀಕೆರೆ ತಾಲೂಕಿನ ಬೇಲೇನಹಳ್ಳಿಯ ನಿವಾಸಿಯಾದ ವಿಶ್ವಾಸ್ ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ ಇಬ್ಬರು ಬೈಕ್​ನಲ್ಲಿ ತರೀಕೆರೆಯಿಂದ ಬೇಲೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತವಾಗಿದೆ.

ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories