ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.100 ರಷ್ಟು ಸಿಗಲಿವೆ ಔಷಧಿಗಳು : ಸಚಿವ ದಿನೇಶ್ ಗುಂಡೂರಾವ್

ಮಡಿಕೇರಿ : ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ಒದಗಿಸಬೇಕು. ಆ ನಿಟ್ಟಿನಲ್ಲಿ ಔಷಧಿಗಳು ಸೇರಿದಂತೆ ಶೇ.100 ರಷ್ಟು ಔಷಧಿಗಳು ದೊರೆಯುವಂತಾಗಲು ಪ್ರಯತ್ನಿಸಲಾಗಿದೆ. ಇನ್ನು ಮೂರು ನಾಲ್ಕು ತಿಂಗಳಲ್ಲಿ ಶೇ.100 ರಷ್ಟು ಗುರಿ ತಲುಪಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಅವರು ಹೇಳಿದರು.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ವತಿಯಿಂದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಆರಂಬಿಸಲಾಗಿರುವ ‘ಡಯಾಲಿಸಿಸ್ ಘಟಕ’ವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯ ಕುಶಾಲನಗರ ಸಮುದಾಯ ಆರೋಗ್ಯ ಆಸ್ಪತ್ರೆಗೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ತಲಾ 1.75 ಕೋಟಿ ರೂ. ಮತ್ತು ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ 2 ಕೋಟಿ ರೂ. ಒಟ್ಟು ಸುಮಾರು 5 ಕೋಟಿ ರೂ.ವಷ್ಟು ಆಸ್ಪತ್ರೆ ಅಭಿವೃದ್ಧಿಗೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಿ ಸುಮಾರು 800 ಯಂತ್ರಗಳನ್ನು ಅಳವಡಿಸಲಾಗಿದೆ. ಹೊಸ ತಾಲ್ಲೂಕು ಕೇಂದ್ರಗಳಲ್ಲಿಯೂ ಸಹ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಪ್ರಯೋಗಗಳನ್ನು ಮಾಡಿ ಸುಲಭವಾಗಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ ಎಂದು ದಿನೇಶ್ ಗುಂಡುರಾವ್ ಅವರು ಹೇಳಿದರು.

Latest Indian news

Popular Stories