ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ

ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ.

ಐದಳ್ಳಿ ಗ್ರಾಮದ ಶಕುಂತಲಮ್ಮ ಎಂಬ ಮಹಿಳೆಗೆ ಗಂಭೀರ ಗಾಯಯವಾಗಿದ್ದು ಅವರನ್ನು ಆಲ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಸ್ಸು ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದು ಶಕುಂತಳಮ್ಮ ಬಾಳೆಹೊನ್ನೂರಿಗೆ ತೆರಳಲು ಬಸ್ ಹತ್ತುವಾಗ ಬಸ್ಸಿನ ಬಾಗಿಲಿನ ಲಾಕ್ ತುಂಡಾಗಿದೆ ಪರಿಣಾಮ ಬಾಗಿಲು ಹಿಡಿದ್ದಿದ್ದ ಮಹಿಳೆ ಏಕಾಏಕಿ ಬಸ್ಸಿನಿಂದ ಹೊರಗೆ ಬಿದ್ದು ಗಾಯಗೊಂಡಿದ್ದಾರೆ.

ಬಸ್ಸಿನ ಸರಿಯಾದ ನಿರ್ವಹಣೆ ಇಲ್ಲದೆ ಈ ರೀತಿ ಆಗಿದೆ ಎಂದು ಪ್ರಯಾಣಿಕರು ಹೇಳಿಕೊಂಡಿದ್ದು ಘಟನೆ ಸಂಬಂಧ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories