ಚಿಕ್ಕಮಗಳೂರು: ಡೆಂಗ್ಯೂ ಜ್ವರಕ್ಕೆ ತುತ್ತಾಗಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ.
ನಗರದ ಮುಹಮ್ಮದ್ ಖಾನ್ ಬಡಾವಣೆ ನಿವಾಸಿ ಸಹರಾ ಬಾನು(18) ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ.
ಸಹರಾ ಕೆಲದಿನಗಳಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದರು. ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.