Chikkamagaluru

ಚಿಕ್ಕಮಗಳೂರಲ್ಲಿ ಪ್ರತಿಭಟನೆ : ಸಿಟಿ ರವಿ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು : ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಇನ್ನೂ. ಚಿಕ್ಕಮಗಳೂರಿನ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಸಿಟಿ ರವಿಯನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಸಿಟಿ ರವಿಯನ್ನು ವಶಕ್ಕೆ ಪಡೆಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button