ಕಳಸ: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ

ಚಿಕ್ಕಮಗಳೂರು: ಕಳಸ ತಾಲೂಕಿನಲ್ಲಿ ಗಾಳಿ-ಮಳೆ ಅಬ್ಬರ ಜೋರಾಗಿದ್ದು ಪರಿಣಾಮ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ನಾಲ್ಕು ಗಂಟೆಯ ಸುಮಾರಿಗೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪದ ಕಗ್ಗನಹಳ್ಳ ಗ್ರಾಮದಲ್ಲಿ ಸುರಿದ ಗಾಳಿ ಮಳೆಗೆ ಗಿರಿಜಾ ಎಂಬುವರ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದ್ದು ಮನೆಯಲ್ಲಿದ್ದ ವಸ್ತುಗಳೆಲ್ಲಾ ನಾಶವಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೂಲಿ ಮಾಡಿ ಜೀವನ ಮಾಡಿತ್ತಿದ್ದ ಗಿರಿಜಾ ಕುಟುಂಬ ಇದೀಗ ಅತಂತ್ರರಾಗಿದ್ದಾರೆ.

Latest Indian news

Popular Stories