ಜೂನ್‌ 1 ರಿಂದ 3 ರವರೆಗೆ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ಚಿಕ್ಕಮಗಳೂರು, ಮೇ 28: ಜೂನ್ 01 ರ ಸಂಜೆ 5 ಗಂಟೆಯಿಂದ ಜೂನ್ 3 ರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮಧ್ಯ ಮಾರಾಟ ನಿಷೇದ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟವನ್ನ ನಿಷೇಧಿಸಲಾಗಿದೆ.

ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ರ ಸಂಬಂಧ ದಿನಾಂಕ:03.06.2024ರಂದು ಸಂಜೆ 4.00 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿರುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತದಾನ ಪ್ರಕ್ರಿಯೆ ಅಂತ್ಯಗೊಳ್ಳುವ ಗಂಟೆಯ ಮುಂಚಿನ 48 ಗಂಟೆಯಿಂದ ಮದ್ಯ ಮಾರಾಟವನ್ನು ನಿಷೇಧಿಸಬೇಕಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಜೂನ್ 01 ರ ಸಂಜೆ 5 ಗಂಟೆಯಿಂದ ಜೂನ್ 3 ರ ಸಂಜೆ 5 ಗಂಟೆಯವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮಧ್ಯ ಮಾರಾಟವನ್ನು ಎಲ್ಲಾ ನಮೂನೆಯ ಮಧ್ಯದ ಅಂಗಡಿಗಳನ್ನು ಮುಚ್ಚುವಂತೆಯೂ ಹಾಗೂ ಮಧ್ಯ ಬೀರ್ ಮಧ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆಗೆ ಶೇಖರಣೆ ತಯಾರಿಕೆ ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.

ಅಧ್ಯಕ್ಷರು, ಫೆಡರೇಶನ್ ಆಫ್ ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ಚಿಕ್ಕಮಗಳೂರು ಜಿಲ್ಲಾ ಘಟಕವಾರು ಅಬಕಾರಿ ಇಲಾಖೆಗೆ ಸರ್ಕಾರವು ರಾಜಸ್ವ ಗುರಿಯನ್ನು ನೀಡಿದ್ದು, ಸದರಿ ಗುರಿಯನ್ನು ಸನ್ನದು (ಮಾಲೀಕರು) ದಾರರಾದ ನಾವೇ ಮದ್ಯ ಮಾರಾಟದ ಮುಖಾಂತರ ಸಾಧಿಸಲು ಕ್ರಮ ವಹಿಸಬೇಕಾಗಿರುತ್ತದೆ.

ಪದೇಪದೇ ಸನ್ನದುಗಳನ್ನು (ಮಾಲೀಕರು) ಮುಚ್ಚುವುದರಿಂದ ಉದ್ಯಮಕ್ಕೂ ಹಾಗೂ ರಾಜಸ್ವ ಸಂಗ್ರಹಣೆಗೂ ಧಕ್ಕೆ ಉಂಟಾಗುವುದರೊಂದಿಗೆ ಸನ್ನದುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರುಗಳ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ. ನಿಷೇಧದಿಂದಾಗಿ ಇಲಾಖೆ ನಿಗದಿಪಡಿಸಿದ ಮದ್ಯ ಬಳಕೆ ಗುರಿಯನ್ನು ಸಾಧಿಸಲು ಕಷ್ಟ ಸಾಧ್ಯವಾಗಿ ಸರ್ಕಾರದ ರಾಜಸ್ವಕ್ಕೂ ಹಾಗೂ ಉದ್ಯಮಕ್ಕೂ ನಷ್ಟ ಉಂಟಾಗುವುದರಿಂದ ಜಿಲ್ಲೆಯಲ್ಲಿ ಜೂನ್ 3 ರಂದು ಸಂಜೆ 5 ಗಂಟೆ ನಂತರ ಮದ್ಯ ಮಾರಾಟ ಮಾಡಲು ಮಾರ್ಪಾಡು ಆದೇಶ ಮಾಡಿ ವ್ಯಾಪಾರದ ಹಿತದೃಷ್ಟಿಯಿಂದ ಹಾಗೂ ರಾಜಸ್ವದ ಗುರಿಯನ್ನು ಸಾಧಿಸಲು ಅನುಕೂಲ ಆಗುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ತಿದ್ದುಪಡಿ ಆದೇಶ ಹೊರಡಿಸಿದ್ದಾರೆ.

Latest Indian news

Popular Stories