ಮಣಿಪಾಲ: ಸಿ.ಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ: ಮಂಗಳೂರಿನ ಆಳ್ವಾಸ್‌ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಶ್ರೀನಿಧಿ (20) ಎಂದು ಗುರುತಿಸಲಾಗಿದೆ.

ಹರಂದೂರು ಗ್ರಾಮ, ಕೊಪ್ಪ ತಾಲೂಕು, ಚಿಕ್ಕಮಗಳೂರಿನವರಾಗಿದ್ದು, ಮೃತಳ ತಂದೆ ಡಯಾಲಿಸ್‌ ಗಾಗಿ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದಕ್ಕೋಸ್ಕರ ಉಡುಪಿ ತಾಲೂಕು ಹೆರ್ಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿ ಹಾಗೂ ಮಗಳು ಶ್ರೀನಿಧಿಯವರೊಂದಿಗೆ ವಾಸವಿದ್ದರು.

ಮಗಳು ಶ್ರೀನಿಧಿ ಪ್ರಾಯ:20 ವರ್ಷ ರವರು ದಿನಾಂಕ: 05.07.2024 ರಂದು ಸಂಜೆ 04:30 ಗಂಟೆಯಿಂದ 06:00 ಗಂಟೆಯ ಮಧ್ಯಾವಧಿಯಲ್ಲಿ ಪಿರ್ಯಾದಿದಾರರು ಹಾಗೂ ಅವರ ಹೆಂಡತಿ ಉಡುಪಿಗೆ ಸಾಮಾಗ್ರಿಗಳನ್ನು ಖರೀದಿಸಲು ಹೋದಾಗ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ತಾನು ವಾಸವಿರುವ ಬಾಡಿಗೆ ಮನೆಯ  ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 31/2024 ಕಲಂ: 194 BNSS ನಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories