ಚಿಕ್ಕಮಗಳೂರು:ಹುಲಿ ಉಗುರು ಪೆಂಡೆಂಟ್ ಧರಿಸಿದ್ದಂತ ಚಿಕ್ಕಮಗಳೂರಿನ ಕಳಸದ DRFO ದರ್ಶನ್ ಅನ್ನು ಸರ್ಕಾರ ಆಮಾನತುಗೊಳಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸದ ಉಪ ವಲಯ ಅರಣ್ಯಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ದರ್ಶನ್ ಹುಲಿ ಉಗುರು ಧರಿಸಿದ್ದ ಪೋಟೋ ವೈರಲ್ ಆಗಿತ್ತು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವರು ಅರಣ್ಯ ಇಲಾಖೆಗೆ ಲಿಖಿತ ದೂರು ನೀಡಲಾಗಿತ್ತು.
ಡಿ ಆರ್ ಎಫ್ ಓ ದರ್ಶನ್ ವಿರುದ್ಧದ ದೂರನ್ನು ಗಂಭೀರವಾಗಿ ಪರಿಗಣಿಸಿದಂತ ಕೊಪ್ಪ ಡಿಎಫ್‌ಓ ನಂದೀಶ್ ಅವರು, ಈ ಸಂಬಂಧ ತನಿಖೆ ನಡೆಸಿ, ಡಿಆರ್ ಎಫ್ ಓ ದರ್ಶನ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದು ಸಾಬೀತಾದ ಹಿನ್ನಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.