Chitradurga
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಇಂದು (ನವೆಂಬರ್ 21) ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.
ಯಾವಾಗ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ನಟ ದರ್ಶನ್‌ಗೆ ಬೆನ್ನು ನೋವು ಹಿನ್ನೆಲೆ ಹೈಕೋರ್ಟ್ ಇತ್ತೀಚೆಗಷ್ಟೇ 6 ವಾರಗಳ ಕಾಲ ಚಿಕಿತ್ಸೆಗೆಂದು ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಇದೀಗ ನಟ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರ ಬೆನ್ನಲ್ಲೆ ಇಂದು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಪ್ರಕರಣದ ನಟ ದರ್ಶನ್, ಪವಿತ್ರಾ ಗೌಡ ಸೇರಿ 6 ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.