ಚಿತ್ರದುರ್ಗ: ಭೀಕರ ಅಪಘಾತ – ನಾಲ್ವರು ಮೃತ್ಯು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ  ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರ್ ತೆರಳುತ್ತಿತ್ತು. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಮದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು  ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Latest Indian news

Popular Stories