Chitradurga

ಚಿತ್ರದುರ್ಗ : ಬಿಸಿಯೂಟ ಸೇವಿಸಿ 60 ವಿದ್ಯಾರ್ಥಿಗಳು ‌ಅಸ್ವಸ್ಥ

ಚಿತ್ರದುರ್ಗ,: ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 60 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಚಿತ್ರದುರ್ಗ ತಾಲೂಕಿನ ಬೀರಾವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ ಬಡಿಸಲಾಗಿತ್ತು.
ಈ ಬಿಸಿಯೂಟ ಸೇವನೆ ಬಳಿಕ 60ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ತರಾಗಿದ್ದಾರೆ. ಕೂಡಲೇ ಬಿಸಿಯೂಟ ಸೇವನೆಯಿಂದ ಅಸ್ವಸ್ಥರಾದಂತಹ ಶಾಲೆಯ ವಿದ್ಯಾರ್ಥಿಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಷಯ ತಿಳಿದು ಚಿತ್ರದುರ್ಗ ತಾಲೂಕಿನ ಬೀರಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button