ಟೈರ್ ಬ್ಲಾಸ್ಟ್, ಭೀಕರ ಅಪಘಾತದಲ್ಲಿ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಚಿತ್ರದುರ್ಗ: ಟಾಯರ್ ಬ್ಲಾಸ್ಟ್ ಆಗಿ ಕಾರಿಗೆ (Car) ಕಂಟೇನರ್ ಲಾರಿ ಡಿಕ್ಕಿಯಾದ (Accident) ಪರಿಣಾಮ ಒಂದೇ ಕುಟುಂಬದ (Family) ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಚಿಕ್ಕಬೆನ್ನೂರು ಬಳಿ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರ ಸ್ಥಿತಿ ಗಂಭೀರವಾಗಿದೆ.

ಚಲಿಸುತ್ತಿದ್ದ ಲಾರಿ ಟೈಯರ್ ಬ್ಲಾಸ್ಟ್ ಆಗಿದ್ದರಿಂದ KA03 AH 6666 ಫಾರ್ಚೂನರ್ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಚಿತ್ರದುರ್ಗದಿಂದ ದಾವಣಗೆರೆ ಕಡೆ ಪ್ರಯಾಣ ಮಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಮೃತರು ಬೆಂಗಳೂರಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮೃತರನ್ನು ಬೆಂಗಳೂರು ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತ (28), ಸೋಹನ್ (02) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿಲ್ಪ, ಸ್ವರ್ಣಜಾರ್ಜ್, ಮಧುಮಿತ, ವಿಜಯ್ ರೆಡ್ಡಿ, ಶ್ರೀಕೃಷ್ಣ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ SP ಧರ್ಮೇಂದ್ರ ಕುಮಾರ್ ಮೀನಾ ಭೇಟಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories