Climate and environmentTrending News

ಬಂಗಾಳಕೊಲ್ಲಿಯಲ್ಲಿ ಅಪಾಯಕಾರಿ ಚಂಡಮಾರುತ ಸೃಷ್ಟಿ; 4 ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ

ಭಾರತದಲ್ಲಿ ಚಳಿಗಾಲದ ಮಧ್ಯೆ ಮತ್ತೆ ಚಂಡಮಾರುತ ಎದುರಾಗುವ ಭೀತಿ ಉಂಟಾಗಿದೆ. ದೇಶದ ನಾಲ್ಕು ರಾಜ್ಯಗಳಲ್ಲಿ ಫೆಂಗಲ್ ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆ ಆ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶ ಇದೀಗ ಭಾರಿ ಚಂಡಮಾರುತದ ರೂಪ ಪಡೆದುಕೊಂಡಿದ್ದು, ತಮಿಳುನಾಡು ಸೇರಿ ಭಾರತದ ನೆರೆಯ ದೇಶ ಶ್ರೀಲಂಕಾದಲ್ಲಿ ಕೂಡ ಇದು ಭಾರೀ ಹಾನಿಯನ್ನುಂಟು ಮಾಡಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಈ ಚಂಡಮಾರುತದ ಗಂಭೀರತೆಯನ್ನು ಪರಿಗಣಿಸಿ ಹವಾಮಾನ ಇಲಾಖೆ ತಮಿಳುನಾಡಿನ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಈ ಚಂಡಮಾರುತವು ನವೆಂಬರ್ 28 ರಂದು ಪೂರ್ಣ ಪ್ರಮಾಣದಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತದಿಂದಾಗಿ ತಮಿಳುನಾಡಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ತಮಿಳುನಾಡು ಹೊರತುಪಡಿಸಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತದಿಂದಾಗಿ ಈ ರಾಜ್ಯಗಳಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ ಉಂಟಾಗಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಕಡಲ ಕಿನಾರೆಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button