ಕರ್ನಾಟಕ ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಜೋರು ಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ. ಈ ಮಳೆ ತೀವ್ರತೆ ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಲ್ಲಿಯ ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಇದರೊಂದಿಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿಲೋ ಮೀಟರ್ ಬೀಸಲಿದೆ. ಈ ಭಾಗದಲ್ಲಿ ಭಾರೀ ಮಳೆಯ ದರ್ಶನವಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.