ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉಡುಪಿ, ಮಾಣಿ, ಧರ್ಮಸ್ಥಳ, ಮಂಕಿ, ಶಿರಾಲಿ, ಗೇರುಸೊಪ್ಪ, ಪಣಂಬೂರು, ಸಿದ್ದಾಪುರ, ಕುಮಟಾ, ಸುಳ್ಯ, ಮಂಗಳೂರು, ಉಪ್ಪಿನಂಗಡಿ, ಕೊಪ್ಪ, ಕೊಟ್ಟಿಗೆಹಾರ, ಕಾರವಾರ, ಕಾರ್ಕಳ, ಪುತ್ತೂರು, ಭಾಗಮಂಡಲ, ಕದ್ರಾ, ಮುಲ್ಕಿ, ಯಲ್ಲಾಪುರ, ಕೋಟ, ಹುಂಚದಕಟ್ಟೆ, ಬೆಳ್ತಂಗಡಿ, ಕಳಸ, ಶೃಂಗೇರಿ, ಎನ್ಆರ್ಪುರ, ಸೋಮವಾರಪೇಟೆ, ಕಮ್ಮರಡಿ, ತಾಳಗುಪ್ಪ, ಜಯಪುರ, ಬಾಳೆಹೊನ್ನೂರಿನಲ್ಲಿ ಭಾರೀ ಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.