ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ 4.4 ತೀವ್ರತೆಯ ಭೂಕಂಪ

ಕಾಬೂಲ್: ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

NCS ಪ್ರಕಾರ, ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಇಂದು ಬೆಳಗ್ಗೆ 08:04:05 (IST)ಕ್ಕೆ ಭೂಮೇಲ್ಮೈಯಿಂದ 180 ಕಿಲೋಮೀಟರ್ ಆಳದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Indian news

Popular Stories