ಗುಜರಾತಿನಲ್ಲಿ ಗುಡುಗು ಸಹಿತ ಭಾರೀ ಮಳೆ,20 ಮಂದಿ ಮೃತ್ಯು

ಗುಜರಾತ್:ಗುಜರಾತಿನಲ್ಲಿ ಸುರಿದ ಅಕಾಲಿಕ ಮಳೆಯ ನಂತರ ಸಿಡಿಲು ಬಡಿದು ಹಲವಾರು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಸೋಮವಾರ ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ. ಗುಜರಾತ್ ನ 252 ತಾಲೂಕುಗಳ ಪೈಕಿ 234 ತಾಲೂಕುಗಳಲ್ಲಿ ರವಿವಾರ ಮಳೆ ದಾಖಲಾಗಿದೆ ಎಂದು ವರದಿಯಾಗಿದೆ ಸೂರತ್, ಸುರೇಂದ್ರನಗರ, ಖೇಡಾ, ತಾಪಿ, ಭರೂಚ್ ಮತ್ತು ಅಮ್ರೇಲಿಯಂತಹ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಕೇವಲ 16 ಗಂಟೆಗಳಲ್ಲಿ 50 ರಿಂದ 117 ಮಿ.ಮೀ. ಮಳೆ ಸುರಿದಿದೆ.

ಗುಜರಾತ್ ನ ವಿವಿಧ ನಗರಗಳಲ್ಲಿ ಪ್ರತಿಕೂಲ ಹವಾಮಾನ ಮತ್ತು ಸಿಡಿಲಿನಿಂದ ಅನೇಕ ಜನರು ಸಾವನ್ನಪ್ಪಿದ ಸುದ್ದಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ. ಸ್ಥಳೀಯ ಆಡಳಿತ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

Latest Indian news

Popular Stories