ವಾರಾಂತ್ಯದಲ್ಲಿ ಕೆಲವೆಡೆ ಮಳೆ ನಿರೀಕ್ಷೆ


ಎಪ್ರಿಲ್‌ 6ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆಯೂ ಇದ್ದು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈಗಾಗಲೇ ರಾಜ್ಯದ ಕೆಲಪ್ರದೇಶಗಳಲ್ಲಿ ಮಳೆ ಬಿದ್ದಿದೆ. ಏ.7ರಂದು ಕರಾವಳಿ ತೀರ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ. ಬೆಳಗಾವಿ, ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಆಗುವ ನೀರಿಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Latest Indian news

Popular Stories