ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌: ಮೇ.29ರ ವರೆಗೆ ಭಾರಿ ಮಳೆ ಮುನ್ಸೂಚನೆ

ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದೆ. ಗುರುವಾರ ದ.ಕ.ಜಿಲ್ಲೆಯಲ್ಲಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಏಳುವ ಸಾಧ್ಯತೆ ಇದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಮತ್ತು ಗೋವಾಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಚಂಡಮಾರುತದ ಪರಿಚಲಯನೆ ಕೇರಳದ ಕೆಳ ಮತ್ತು ಮಧ್ಯಮ ಉಷ್ಣ ವಲಯದ ಮಟ್ಟದಲ್ಲಿದೆ. ಅದರ ಪ್ರಭಾವ ಮುಂದಿನ 6 ದಿನಗಳಲ್ಲಿ ಅಂದರೆ, ಮೇ 24ರಿಂದ 29ರ ವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗಲಿದೆ. ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Latest Indian news

Popular Stories