ರಾಜ್ಯದ ಕೆಲವೆಡೆ ಮಳೆ, ಇನ್ನೂ ಹಲವೆಡೆ ಬಿಸಿಲು!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಲೇ ಇದೆ. ಆದ್ರೆ ಕೆಲವೆಡೆ ಮೊದಲ ಮಳೆಯಾಗಿದೆ. ಇಂದು ಸಹ ಕೆಲವೆಡೆ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಮತ್ತು ದಕ್ಷಿಣ ಕನ್ನಡದ ಘಟ್ಟಗಳ ಭಾಗಗಳಲ್ಲಿ ಇಂದು ಲಘು ಮಳೆಯಾಗುವ ಸಾಧ್ಯತೆ ಇದೆಯಂತೆ. ಜನ ಸಹ ಮಳೆಗಾಗಿ ಕಾಯ್ತಾ ಇದ್ದಾರೆ.

ನಿನ್ನೆ ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ. ಒಂದೇ ಗಂಟೆಗೆ ಒಂದೂವರೆ ಇಂಚಿನಷ್ಟು ಮಳೆಯಾಗಿದೆ. ಮಳೆ ಕಂಡು ರೈತರು ಸಂತಗೊಂಡಿದ್ದಾರೆ.

ಮಡಿಕೇರಿ, ಭಾಗಮಂಡಲ, ಸುಳ್ಯ, ವಿರಾಜಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 20ರ ನಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ರಾಜ್ಯದ ಬೇರೆ ಬೇರೆ ಕಡೆ ಒಣಹವೆ ಮುಂದುವರೆಯಲಿದೆ. ಬೆಂಗಳೂರಲ್ಲೂ ಹೆಚ್ಚು ಬಿಸಿಲಿದೆ. ಉಷ್ಣಾಂಶ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ.ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಬೀದರ್, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲೂ ಹೆಚ್ಚಾಗಲಿದೆ ಉಷ್ಣಾಂಶ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.

ಮಾರ್ಚ್ ಅಂತ್ಯದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ ಅವರು ತಿಳಿಸಿದ್ದಾರೆ.

Latest Indian news

Popular Stories