ವಿಪರೀತ ಬಿಸಿಯ ನಡುವೆ ಮೂರು ದಿನ ಈ ಜಿಲ್ಲೆಯಲ್ಲಿ ಮಳೆ – ಯೆಲ್ಲೊ ಅಲರ್ಟ್

ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಬಾಗಲಕೋಟೆ ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯಾದ್ಯಂತ ಒಣಹವೆ ಇತ್ತು, ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಉಷ್ಣ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

Latest Indian news

Popular Stories