ಉಡುಪಿ: ಗುಡುಗು-ಮಿಂಚು ಸಹಿತ ಧಾರಕಾರ ಮಳೆ; ಸಮುದ್ರ ಪ್ರಕ್ಷುಬ್ಧ

ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಗುಡುಗು-ಮಿಂಚು ಸಹಿತ ಧಾರಕಾರ ಮಳೆಯಾಗಿದೆ. ಶನಿವಾರ ಬೆಳಿಗ್ಗೆಯೂ ಮೋಡ ಕವಿದ ವಾತಾವರಣ ಮುಂದುವರಿದಿದೆ.

ಶುಕ್ರವಾರದಿಂದೀಚೆಗೆ ಭಾರಿ ಮಳೆಯಾಗುತ್ತಿದೆ. ಶನಿವಾರ ಬೆಳಗಿನ ಜಾವ ದಟ್ಟ ಮೋಡದೊಂದಿಗೆ ಮಳೆಯಾಗುತ್ತಿದ್ದು, ಕೆಲ ದಿನ ಇದೇ ರೀತಿ ಮಳೆ ಸುರಿಯುವ ಲಕ್ಷಣಗಳಿರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ.

ತೀವ್ರ ಗಾಳಿ ಮಳೆಯ ಕಾರಣಕ್ಕೆ ಸಮುದ್ರವು ಪ್ರಕ್ಷುಬ್ಧ ಗೊಂಡಿದೆ. ಮೇ 25ರಿಂದ 27ರವರೆಗೆ ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಕೇರಳದಲ್ಲಿ ಭಾರೀ ಮಳೆ ಸಂಭವ:

ಭಾರತೀಯ ಹವಾಮಾನ ಇಲಾಖೆ (IMD) ಕೇರಳದ (Kerala) 7 ಜಿಲ್ಲೆಗಳಿಗೆ ಇಂದು (ಶನಿವಾರ) ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಎರ್ನಾಕುಲಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ‌ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಇಂದು 6 ಸೆಂ.ಮೀ ಹಾಗೂ 11 ಸೆಂ.ಮೀ ನಡುವೆ ಮಳೆಯಾಗುವ (Heavy Rain) ಸಾಧ್ಯತೆಗಳಿವೆ ಎಂದು ಇಲಾಖೆ ಮನ್ಸೂಚನೆ ಕೊಟ್ಟಿದೆ.

Latest Indian news

Popular Stories