ಉಡುಪಿ: ಹೆಬ್ರಿ ಅಸುಪಾಸಿನಲ್ಲಿ ಮಳೆ

ಉಡುಪಿ: ಹೆಬ್ರಿ ತಾಲೂಕಿನ ಆಸುಪಾಸಿನ ಪ್ರದೇಶಗಳಲ್ಲಿ ಮಧ್ಯಾಹ್ನ ಮಳೆಯಾಗಿದೆ. ಗಾಳಿ, ಗುಡುಗು ಮಿಂಚು ಸಹಿತ ಸ್ವಲ್ಪ ಸಮಯ ಮಳೆ ಸುರಿದಿದೆ.

ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆರಾಯ ತಂಪರೆಯುತ್ತಲೇ ಬಂದಿದ್ದಾನೆ. ಇನ್ನು ಹಲವೆಡೆ ಆಗಾಗಾ ಮಾತ್ರ ಜಿನುಗು ಮಳೆಯಾಗುತ್ತಿದೆ ಅಷ್ಟೇ ಹೊರತುಪಡಿಸಿದ್ರೆ, ಉಳಿದ ಭಾಗಗಳಲ್ಲಿ ತಾಪಮಾನದ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದರ ನಡುವೆಯೂ ಹಲವು ಜಿಲ್ಲೆಗಳಲ್ಲಿ ಇಂದು (ಮೇ 12) ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಈಗಾಗಲೇ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ಗುಡುಗು ಸಹಿತ ಮಳೆಯಾಗಿದೆ.

ಇಂದು ಎಲ್ಲೆಲ್ಲಿ ಭಾರೀ ಮಳೆ?: ಇನ್ನು ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಕಲ್ಯಾಣ ಕರ್ನಾಟಕದ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗ ಸಾಧ್ಯತೆ. ಅದರಲ್ಲೂ ದಕ್ಷಿಣ ಕರಾವಳಿ ಕರ್ನಾಟಕದಲ್ಲಿ ಇಂದು ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Latest Indian news

Popular Stories