Climate and environmentFeatured StoryState News

ಜನವರಿ 4 ರಿಂದ 7 ವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆಯ ಸೂಚನೆ

ಬೆಂಗಳೂರು, ಜನವರಿ 01: ಪ್ರತಿ ವರ್ಷದಂತೆ ಈ ವರ್ಷವೂ ಕರ್ನಟಕದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಶುರುವಾಗಿದೆ. ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿದ್ದು, ಹೊಸ ವರ್ಷದ ಆರಂಭದಲ್ಲೇ ಮಳೆಯ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಜನವರಿ 4 ರಿಂದ 7 ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button