Climate and environment

ಹವಾಮಾನ ವರದಿ: ಮೇ 7 ರಿಂದ ಉಡುಪಿಯಲ್ಲಿ ಮಳೆಯ ವಾತಾವರಣ; ಇಂದು ಮಳೆಯಾಗುವ ಜಿಲ್ಲೆಗಳು…

ಕೊಡಗು, ಮೈಸೂರು ಸೇರಿದಂತೆ ಹಲವೆಡೆ ಇಂದು ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ಗುರುವಾರ ಬೆಂಗಳೂರಿನ ಬಹುತೇಕ ಕಡೆ ಮಳೆಯಾಗಿದೆ. ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಉಷ್ಣ ಅಲೆ ಇರಲಿದೆ.

ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್​, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ,ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಗುರುವಾರ ಕುಂದಾಪುರ, ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿದೆ. ರಾಯಚೂರಿನಲ್ಲಿ 43.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಕೆವಿಕೆಯಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ41.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button