ಕೊಡಗು ಇಂದು ಬೆಳಗ್ಗೆ ೮ ಗಂಟೆ ವೇಳೆಗೆ 653 ಹೊಸ ಕೋವಿಡ್-೧೯ ಪ್ರಕರಣಗಳು

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ೮ ಗಂಟೆ ವೇಳೆಗೆ ೬೫೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.
೬೪೧ ಆರ್.ಟಿ.ಪಿ.ಸಿ.ಆರ್ ಮತ್ತು ೧೨ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೨೯೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ೨೮೧ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು ೯ ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ೨೦೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ೨೦೬ ಆರ್.ಟಿ.ಪಿ.ಸಿ.ಆರ್ ಮತ್ತು ೧ ಪ್ರಕರಣ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ ೧೫೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ೧೫೪ ಆರ್.ಟಿ.ಪಿ.ಸಿ.ಆರ್ ಮತ್ತು ೨ ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೭,೦೮೫ ಆಗಿದ್ದು,
ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬೨೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೧೧,೮೧೭ ಮಂದಿ ಗುಣಮುಖರಾಗಿದ್ದಾರೆ.
೫೦೮೧ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೦ ಮಂದಿ ಮೃತಪಟ್ಟಿದ್ದು, ಒಟ್ಟು ೧೮೭ ಮರಣ ಪ್ರಕರಣಗಳು
ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೪೮೮ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

Latest Indian news

Popular Stories