ದೇಶದಲ್ಲಿ‌ 24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳ ಅವಧಿಯಲ್ಲಿ 3,47,254 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 703 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,88,396ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜನವರಿ 21) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಒಂದೇ ದಿನದಲ್ಲಿ 94,774 ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದೆ. ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 20,18,825ಕ್ಕೆ ಹೆಚ್ಚಳವಾಗಿದೆ. ಭಾರತದಲ್ಲಿ 24ಗಂಟೆಯಲ್ಲಿ 2,51,777 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ದೇಶದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 9,692ಕ್ಕೆ ಏರಿಕೆಯಾಗಿದೆ. ಗುರುವಾರಕ್ಕಿಂತ ಶೇ.4.36ರಷ್ಟು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ತಿಳಿಸಿದೆ.

ಕೋವಿಡ್ ಸೋಂಕಿನಿಂದ ದೇಶದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3,60,58,806ಕ್ಕೆ ಏರಿಕೆಯಾಗಿದೆ. ದಿನದ ಪಾಸಿಟಿವಿಟಿ ದರ ಶೇ.17.94ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.16.56ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ.

Latest Indian news

Popular Stories