ರಾಜ್ಯದಲ್ಲಿ ಇಂದು 1826 ಮಂದಿಗೆ ಕೋರೊನಾ ಸೋಂಕು ಪಾಸಿಟಿವ್; 33 ಮಂದಿ ಮೃತ್ಯು

ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಕಡಿಮೆಯಾಗಿದ್ದ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,826 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,22,875ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 33 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,881ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿನಲ್ಲಿ ಇಂದು 377 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,31,474ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,618 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,63,117ಕ್ಕೆ ಏರಿಕೆಯಾಗಿದೆ. ಇನ್ನು 22,851 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,67,237 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,826 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.09ಕ್ಕೆ ಇಳಿದಿದೆ.

Latest Indian news

Popular Stories