ಬೆಂಗಳೂರು: ಹತ್ತು ದಿನದಲ್ಲಿ 499 ಮಕ್ಕಳಲ್ಲಿ ಕೋರೊನಾ ಸೋಂಕು ಪತ್ತೆ!

ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿರುವ ನಡುವೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಕಳೆದ 10 ದಿನಗಳ ವರದಿಯಲ್ಲಿ 499 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.

ಕಳೆದ 5 ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 19 ವರ್ಷದೊಳಗಿನ 262 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದು ಮೂರು ಪಟ್ಟು ಹೆಚ್ಚಾಗುವ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದು, ಬಿಬಿಎಂಪಿಯನ್ನು ಚಿಂತೆಗೀಡುಮಾಡಿದೆ.

ಕಳೆದ ಹತ್ತು ದಿನಗಳಲ್ಲಿ ನಗರದಲ್ಲಿ 499 ಮಕ್ಕಳು ಕೊರೊನಾ ಬಾಧಿತರಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ನವಜಾತ ಶಿಶುಗಳಿಂದ 9 ವರ್ಷವರೆಗಿನ 194 ಮಕ್ಕಳು ಹಾಗೂ 10 ವರ್ಷದಿಂದ 19 ವರ್ಷದೊಳಗಿನ 305 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Latest Indian news

Popular Stories