ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ೩೩೩೧

ಮಡಿಕೇರಿ ಏ.೩೦ : ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೦,೨೪೦ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮೪ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೭೦೫೮ ಮಂದಿ ಗುಣಮುಖರಾಗಿದ್ದಾರೆ. ೩೩೩೧ ಸಕ್ರಿಯ ಪ್ರಕರಣಗಳಿದ್ದು, ಶುಕ್ರವಾರ ಬೆಳಗ್ಗೆ ೮ ಗಂಟೆಯೊಳಗೆ ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩ ಮಂದಿ ಮೃತಪಟ್ಟಿದ್ದು, ಒಟ್ಟು ೧೦೫ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೪೩೫ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ೮ ಗಂಟೆ ವೇಳೆಗೆ ೨೫೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೩೧ ಆರ್.ಟಿ.ಪಿ.ಸಿ.ಆರ್ ಮತ್ತು ೨೩ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೯೦, ಸೋಮವಾರಪೇಟೆ ತಾಲೂಕಿನಲ್ಲಿ ೧೮ ಮತ್ತು
ವಿರಾಜಪೇಟೆ ತಾಲೂಕಿನಲ್ಲಿ ೧೪೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ

Latest Indian news

Popular Stories