೧೨ ಗ್ರಾ.ಪಂ ಗಳಲ್ಲಿ ಸೋಂಕಿತರ ಸಂಖ್ಯೆ ಅಧಿಕ : ನಿಗಾ ವಹಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

ಮಡಿಕೇರಿ ಜೂ.೮ : ಕೊಡಗು ಜಿಲ್ಲೆಯ ೧೦ ರಿಂದ ೧೨ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಅಂತಹ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಜೊತೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸಿ, ಸೋಂಕಿತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ನಿರ್ದೇಶನ ನೀಡಿದ್ದಾರೆ.
ಕೋವಿಡ್ ನಿಯಂತ್ರಣ ಮತ್ತು ಪ್ರಾಕೃತಿಕ ವಿಕೋಪ ಸಿದ್ಧತೆ ಬಗ್ಗೆ ಮಂಗಳವಾರ ನಗರದ ಜಿ.ಪಂ.ಸಭಾAಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚು ಕಂಡುಬರುವ ಕಡೆ ಇತರರಿಗೆ ಹರಡದಂತೆ ಮುನ್ನೆಚ್ಚರ ವಹಿಸಬೇಕು. ಆ ದಿಸೆಯಲ್ಲಿ ಪಾಸಿಟಿವ್ ಬಂದವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು. ಇನ್ನೊಂದು ವಾರದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಬೇಕು. ಜೊತೆಗೆ ಮರಣ ಪ್ರಮಾಣವನ್ನು ಸೊನ್ನೆಗೆ ತರಬೇಕು. ಆ ನಿಟ್ಟಿನಲ್ಲಿ ಗಂಭೀರವಾಗಿ ಪ್ರಯತ್ನಿಸುವಂತೆ ವೈದ್ಯಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಕಟ್ಟುನಿಟ್ಟಿನ ಸೂಚಿಸಿದರು.
ಕೋವಿಡ್ ನಿಯಂತ್ರಣಕ್ಕೆ ಸಂಬAಧಿಸಿದAತೆ ಕೊಡಗು ಜಿಲ್ಲೆ ಮಾದರಿಯಾಗಬೇಕು. ಸೀಲ್‌ಡೌನ್ ಮಾಡುವ ಪ್ರದೇಶದ ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಬೇಕು. ಗೃಹ ಸಂಪರ್ಕ ತಡೆ ಹಾಗೂ ಕೋವಿಡ್ ಆರೈಕೆ ಕೇಂದ್ರದಲ್ಲಿರುವ ಸೋಂಕಿತರನ್ನು ಸರಿಯಾಗಿ ಗಮನಿಸಿದರೆ, ಮರಣ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದೆ ಎಂದು ವಿ.ಅನ್ಬುಕುಮಾರ್ ಅವರು ಹೇಳಿದರು.
ಕೋವಿಡ್ ಪಾಸಿಟಿವಿ ಪ್ರಮಾಣ ಕಡಿಮೆ ಮಾಡಬೇಕು. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಸೋಂಕಿತರು ಹೆಚ್ಚು ಕಂಡುಬರುವ ಕಡೆ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಎಂದರು.
ಈಗಾಗಲೇ ಮುಂಗಾರು ಆರಂಭವಾಗಿರುವುದರಿAದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ರೀತಿಯಲ್ಲಿ ಲೋಪ ಉಂಟಾಗದAತೆ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
ಮಳೆಹಾನಿ ಸಂಬAಧ ಕಳೆದ ವರ್ಷದ ಕಾಮಗಾರಿಗಳನ್ನು ಪೂರ್ಣಗೊಳಿಸಿ ವರದಿ ನೀಡಬೇಕು. ಮಳೆ ಆರಂಭವಾದರೆ ನವೆಂಬರ್ ತನಕ ಯಾವುದೇ ಕಾಮಗಾರಿ ಕೈಗೊಳ್ಳಲು ಕಷ್ಟ ಸಾಧ್ಯವಾಗಲಿದೆ. ಆದ್ದರಿಂದ ಈಗಾಗಲೇ ಅನುಮೋದನೆ ಪಡೆಯಲಾಗಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬAಧಪಟ್ಟ ಎಂಜಿನಿಯರ್‌ಗಳಿಗೆ ವಿ.ಅನ್ಬುಕುಮಾರ್ ಅವರು ಸೂಚಿಸಿದರು.
ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕಿರುಪುಸ್ತಕ ಹೊರತರುವಂತೆ ಸಲಹೆ ಮಾಡಲಾಗಿತ್ತು, ಆದರೆ ಇದುವರೆಗೆ ಈ ಕೆಲಸ ಆಗಿಲ್ಲ, ಮುಂದಿನ ದಿನದಲ್ಲಿ ಕಿರುಪುಸ್ತಕ ಹೊರತರಬೇಕು. ಪ್ರವಾಹ ಹಾಗೂ ಭೂ ಕುಸಿತ ಸೂಕ್ಷö್ಮ ಪ್ರದೇಶಗಳ ನಿಖರ ಮಾಹಿತಿ ಒದಗಿಸಬೇಕು ಎಂದರು.
ಕಳೆದ ವರ್ಷ ಉಂಟಾದ ಮಳೆಹಾನಿ ಸಂಬAಧಿಸಿದAತೆ ಶೇ.೭೦ ರಷ್ಟು ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆದಿಲ್ಲವೇಕೆ ಎಂದು ಪ್ರಶ್ನಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು, ಕಳೆದ ವರ್ಷದ ಮಳೆಹಾನಿ ಕಾಮಗಾರಿಗಳನ್ನು ಕೈಗೊಳ್ಳದೆ ಸಾರ್ವಜನಿಕರಿಗೆ ಉತ್ತರಿಸುವುದಾರೂ ಹೇಗೆ ಎಂದು ಎಂಜಿನಿಯರ್‌ಗಳಿಗೆ ಎಚ್ಚರಿಸಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾತನಾಡಿ ಪ್ರಾಕೃತಿಕ ವಿಕೋಪ ಸಂಬAಧಿಸಿದAತೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ಸಭೆ ಮಾಡಿ ಹಲವು ಸಲಹೆ, ನಿರ್ದೇಶನ ನೀಡಲಾಗಿದೆ ಎಂದರು.
ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳು ಮತ್ತು ಸಹಾಯಕ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಸೂಕ್ಷö್ಮ ಪ್ರದೇಶಗಳಿಗೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕೋವಿಡ್ ೧೯ ನಿಯಂತ್ರಣ ಸಂಬAಧ ಹೆಚ್ಚಿನ ಗಮನಹರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ. ಅಗತ್ಯವಿದ್ದಲ್ಲಿ ಹೊಸ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಅನುಮತಿ ನೀಡಲಾಗುವುದು ಎಂದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಾತನಾಡಿ ಕೋವಿಡ್ ೧೯ ನಿಯಂತ್ರಣ ಹಾಗೂ ಪ್ರಾಕೃತಿಕ ವಿಕೋಪ ಸಂಬAಧಿಸಿದAತೆ ಗ್ರಾ.ಪಂ.ಮಟ್ಟದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಜೊತೆಗೆ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನರ್ಸರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಬಾರಿ ಆರೋಗ್ಯ, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಆ ದಿಸೆಯಲ್ಲಿ ಪ್ರತಿ ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಯನ್ನಾಗಿ ಮಾಡಲು ಪ್ರಯತ್ನಿಸಲಾಗುವುದು ಎಂದು ಜಿ.ಪಂ.ಸಿಇಒ ಅವರು ಜಿ.ಪಂ.ಆಡಳಿತಾಧಿಕಾರಿಯೂ ಆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರ ಗಮನಕ್ಕೆ ತಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮಾಹಿತಿ ನೀಡಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಈಗಾಗಲೇ ದಿನದ ೨೪ ಗಂಟೆಯೂ ಕಾರ್ಯ ನಿರ್ವಹಿಸುವಲ್ಲಿ ಸಹಾಯವಾಣ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಈಗಾಗಲೇ ಎನ್‌ಡಿಆರ್‌ಎಫ್ ತಂಡ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಜಿಎಸ್‌ಐ ವತಿಯಿಂದ ಸೂಕ್ಷö್ಮ ಪ್ರದೇಶಗಳನ್ನು ಗುರ್ತಿಸಲಾಗಿದೆ ಎಂದರು.
ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ವಿವಿಧ ಇಲಾಖೆಗಳಿಗೆ ಬೇಕಿರುವ ರೈನ್ ಕೋಟ್, ಗಂಬೂಟ್, ಕೊಡೆ ಹಾಗೂ ಇತರೆ ಅಗತ್ಯ ಉಪಕರಣಗಳನ್ನು ಪೂರೈಸಲು ಕ್ರಮವಹಿಸಲಾಗಿದೆ. ಹಾಗೆಯೇ ಭಾಗಮಂಡಲದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಬೋಟ್ ಹಾಗೂ ಗೃಹ ರಕ್ಷಕದಳದವರನ್ನು ನಿಯೋಜಿಸಲು ಕ್ರಮ ವಹಿಸಲಾಗಿದೆ ಎಂದರು.
ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ.ಮೋಹನ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಮಂಜುನಾಥ್, ಜಿ.ಪಂ.ಎAಜಿನಿಯರ್ ಶ್ರೀಕಂಠಯ್ಯ, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಸೆಸ್ಕ್ ಎಂಜಿನಿಯರ್ ಅಶೋಕ್ ಇತರರು ಹಲವು ಮಾಹಿತಿ ನೀಡಿದರು. ಫೋಟೋ :: ಅನ್ಬು ಕುಮಾರ್

Latest Indian news

Popular Stories