ಕೊಡಗಿನಲ್ಲಿ ಕೋವಿಡ್ : ಮಾಹಿತಿ ಪಡೆದ ಮಾಜಿ ಸಿಎಂ

ಮಡಿಕೇರಿ ಮೇ ೨೧ : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರಿಂದ ಮಾಹಿತಿ ಪಡೆದರು.
ಸಾಮಾಜಿಕ ಜಾಲತಾಣದ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಜೆಡಿಎಸ್ ಶಾಸಕರು ಹಾಗೂ ಮುಖಂಡರೊAದಿಗೆ ಏಕಕಾಲಕ್ಕೆ ವಿಚಾರ ವಿನಿಮಯ ಮಾಡಿಕೊಂಡ ಮಾಜಿ ಸಿಎಂ ಕೊಡಗಿನಲ್ಲಿ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಇಳಿಕೆಯಾಗದ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಕೆ.ಎಂ.ಗಣೇಶ್ ಅವರು ಕೊಡಗಿನ ಕೋವಿಡ್ ಪರಿಸ್ಥಿತಿಯ ಬಗ್ಗೆ ಪಕ್ಷದ ವರಿಷ್ಠರು ಹಾಗೂ ಮಾಜಿ ಮುಖ್ಯಮಂತ್ರಿಗಳೂ ಆದ ಕುಮಾರಸ್ವಾಮಿ ಅವರ ಬಳಿ ವಿವರಿಸಲಾಗಿದೆ. ವೈದ್ಯಕೀಯ ವ್ಯವಸ್ಥೆಯ ನ್ಯೂನತೆಗಳು ಮತ್ತು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಹಣ ಪಡೆಯುತ್ತಿರುವ ಬಗ್ಗೆಯೂ ಗಮನ ಸೆಳೆಯಲಾಗಿದೆ ಎಂದರು.
ಕೋವಿಡ್ ಆಸ್ಪತ್ರೆಗಳಲ್ಲಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯ ಗಂಭೀರತೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನ ಮೊತ್ತ ಅಲ್ಪ ಪ್ರಮಾಣದಾಗಿದ್ದು, ಇದರಿಂದ ಬಡವರು, ಕೂಲಿ ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ರೈತರು, ಆಟೋ ಚಾಲಕರಿಗೆ ಯಾವುದೇ ಪ್ರಯೋಜನವಾಗುವುದಿಲ್ಲವೆಂದು ಇದೇ ಸಂದರ್ಭ ಗಣೇಶ್ ಟೀಕಿಸಿದರು.
ಪ್ಯಾಕೇಜ್ ಮೊತ್ತವನ್ನು ಏರಿಕೆ ಮಾಡಬೇಕು ಮತ್ತು ಜನಸ್ನೇಹಿ ಲಾಕ್‌ಡೌನ್ ವ್ಯವಸ್ಥೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಫೋಟೋ :: ಕುಮಾರಸ್ವಾಮಿ

Latest Indian news

Popular Stories