ಸಾವಿನ ಸಂಖ್ಯೆ ೧೨೫ ಕ್ಕೆ ಏರಿಕೆ : Covid in Kodagu

ಮಡಿಕೇರಿ ಮೇ ೩ : ಕೊಡಗು ಜಿಲ್ಲೆಯಲ್ಲಿ ೪೩೦೪ ಕೋವಿಡ್ ಸೋಂಕಿತ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ (ಇಂದು ಬೆಳಗ್ಗೆ ೮ ಗಂಟೆ ವರೆಗೆ) ೫ ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ ೧೨೫ ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೪೭೩ ಆಗಿದೆ. ಸೋಂಕು ವ್ಯಾಪಿಸದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಜನರು ಮನೆಯಲ್ಲೇ ಇರುವ ಮೂಲಕ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
::: ವಿರಾಜಪೇಟೆ ತಾಲ್ಲೂಕಿನಲ್ಲಿ ಹೆಚ್ಚು ಸೋಂಕಿತರು :::
ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ೮ ಗಂಟೆ ವೇಳೆಗೆ ೫೯೯ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.
ವಿರಾಜಪೇಟೆ ತಾಲ್ಲೂಕಿನಲ್ಲಿ ೨೮೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೨೮೮ ಆರ್.ಟಿ.ಪಿ.ಸಿ.ಆರ್ ಮತ್ತು ೧ ಪ್ರಕರಣಗಳು ರಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ೧೧೭ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ೧೯೩ ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೨,೪೭೪ ಆಗಿದೆ. ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩೩೨ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇಲ್ಲಿಯವರೆಗೆ ಗುಣಮುಖರಾದ ಸೋಂಕಿತರ ಒಟ್ಟು ಸಂಖ್ಯೆ ೮೦೪೫ ಆಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Latest Indian news

Popular Stories