ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 669 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ

634 ಆರ್.ಟಿ.ಪಿ.ಸಿ.ಆರ್ ಮತ್ತು 35 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೨೨೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ೨೨೨ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು ೩ ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ೨೫೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ೨೨೪ ಆರ್.ಟಿ.ಪಿ.ಸಿ.ಆರ್ ಮತ್ತು ೩೧ ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ ೧೮೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ೧೮೮ ಆರ್.ಟಿ.ಪಿ.ಸಿ.ಆರ್ ಮತ್ತು ೧ ಪ್ರಕರಣ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೪,೪೮೨ ಆಗಿದ್ದು,
ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೩೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೯೨೫೩ ಮಂದಿ ಗುಣಮುಖರಾಗಿದ್ದಾರೆ.
೫೦೭೭ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೭ ಮಂದಿ ಮೃತಪಟ್ಟಿದ್ದು, ಒಟ್ಟು ೧೫೨ ಮರಣ ಪ್ರಕರಣಗಳು
ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೪೬೬ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

Latest Indian news

Popular Stories