ಕೊಡಗಿನಲ್ಲಿ ಕೋವಿಡ್ ಅತಿರೇಕ : ಸಕ್ರಿಯ ಪ್ರಕರಣಗಳು ೧೫೦೬

ಮಡಿಕೇರಿ ಏ.೨೪ : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ೮ ಗಂಟೆ ವೇಳೆಗೆ ೫೪೮ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೫೨೬ ಆರ್.ಟಿ.ಪಿ.ಸಿ.ಆರ್ ಮತ್ತು ೨೨ ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ೧೨೭, ಸೋಮವಾರಪೇಟೆ ತಾಲ್ಲೂಕಿನಲ್ಲಿ ೧೯೪ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ ೨೨೭ ಸೋಂಕಿತರು ಪತ್ತೆಯಾಗಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೮೨೦೦ ಆಗಿದ್ದು, ೬೬೦೩ ಮಂದಿ ಗುಣಮುಖರಾಗಿದ್ದಾರೆ. ೧೫೦೬ ಸಕ್ರಿಯ ಪ್ರಕರಣಗಳಿದ್ದು, ೯೧ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೩೧೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ
::: ಆರೋಗ್ಯಾಧಿಕಾರಿ ಸ್ಪಷ್ಟೀಕರಣ :::
ಶುಕ್ರವಾರ ಕೋವಿಡ್ ಸೋಂಕಿತರೊಬ್ಬರು ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇದೆ ಎಂದು ವಿಡಿಯೋ ಮಾಡಿ ವೈರಲ್ ಮಾಡಿದ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಸ್ಪಷ್ಟೀಕರಣ ನೀಡಿದ್ದಾರೆ.
ಕೋವಿಡ್ ಪರೀಕ್ಷೆಗೆಂದು ಬಂದವರನ್ನು ಒಂದು ವಾರ್ಡ್ ನಲ್ಲಿ ಕೂರಿಸಲಾಗುತ್ತದೆ. ಹೀಗೆ ಒಂದೊAದು ಹಾಸಿಗೆ ಮೇಲೆ ೨-೩ ಮಂದಿ ಕುಳಿತ್ತಿದ್ದಾರೆಯೇ ಹೊರತು ಸೋಂಕಿತರು ಎಂದು ದೃಢಪಟ್ಟ ನಂತರ ಹಾಸಿಗೆಯಲ್ಲಿ ದಾಖಲಾದವರಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಪರೀಕ್ಷೆಗೆ ಬಂದವರನ್ನು ಒಂದು ಕಡೆ ಕೂರಿಸಲಾಗುತ್ತದೆ, ಸೋಂಕು ಪಾಸಿಟಿವ್ ಆಗಿದ್ದಲ್ಲಿ ಸೋಂಕಿತರಿಗೆ ಪ್ರತ್ಯೇಕ ವಾರ್ಡ್ನಲ್ಲಿ ಹಾಸಿಗೆ ನೀಡಲಾಗುತ್ತದೆ. ಸಣ್ಣಪುಟ್ಟ ನ್ಯೂನತೆಗಳು ಆಗಿದ್ದಲ್ಲಿ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುಸಜ್ಜಿತವಾದ ೫೬ ಬೆಡ್‌ಗಳ ತೀವ್ರ ನಿಗಾ ಘಟಕ ಕಾರ್ಯ ನಿರ್ವಹಿಸುತ್ತದೆ. ಇಲ್ಲಿ ಮಕ್ಕಳ ಮತ್ತು ನವಜಾತ ಶಿಶುಗಳಿಗೆ ವಿಶೇಷ ಸೌಲಭ್ಯವಿದೆ. ಕೋವಿಡ್ ರೋಗಿಗಳಿಗೆ ಡಯಾಲಿಸಿಸ್‌ಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೨೬+೬ ಒಟ್ಟು ೩೨ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ.
೧೩ ಕೆ.ಎಲ್ ಆಮ್ಲಜನಕ ಘಟಕ ಸ್ಥಾಪಿಸಲಾಗಿದ್ದು ಅಕ್ಟೋಬರ್ ೧೦ ೨೦೨೦ ರಿಂದ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಒಂದು ಖಾಸಗಿ ಆಸ್ಪತ್ರೆಯನ್ನು ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಹಸ್ತಾಂತರ ಪಡೆದುಕೊಂಡಿದ್ದು ಸಾರ್ವಜನಿಕರಿಗೆ ನಾನ್ ಕೋವಿಡ್ ಸೇವೆಗಳನ್ನು ಒದಗಿಸಲಾಗುತ್ತದೆ.
::: ೭೦೦ ಹಾಸಿಗಳಿಗೆ ವ್ಯವಸ್ಥೆ :::
ಜಿಲ್ಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಮುಖಗವಸು ಧರಿಸದ ಸಾರ್ವಜನಿಕರ ಮೇಲೆ ಕಟ್ಟುನಿಟ್ಟಿನ ಕ್ರಮ. ಜಿಲ್ಲೆಯಲ್ಲಿ ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದ್ದು, ಈಗಿರುವ ೩ ಸಿ.ಸಿ.ಸಿ (೩೦೦ ಹಾಸಿಗೆಗಳ) ಜೊತೆಗೆ ಹೆಚ್ಚುವರಿಯಾಗಿ ೩ ಸಿಸಿಸಿ (೪೦೦ ಹಾಸಿಗೆಗಳ) ಒಟ್ಟು ೭೦೦ ಹಾಸಿಗೆಗಳಿಗೆ ಹೆಚ್ಚಿಸಲು ಕ್ರಮವಹಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಪ್ರತಿ ದಿನ ಕೋವಿಡ್ ಪರೀಕ್ಷೆಯ ಗುರಿ ಹೆಚ್ಚಿಸಲಾಗಿದ್ದು, ಪ್ರತಿ ದಿನ ೯೦೦ ಆರ್‌ಟಿಪಿಸಿಆರ್ ಮತ್ತು ೧೦೦ ಆರ್‌ಎಟಿ ರಂತೆ ಪ್ರತಿ ದಿನ ಒಟ್ಟು ೧೦೦೦ ಪರೀಕ್ಷೆ ಮಾಡಲು ಗುರಿಯನ್ನು ನಿಗಧಿಪಡಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಒಟ್ಟು ೯ ಸಂಚಾರಿ ತಂಡಗಳನ್ನು ರಚಿಸಲಾಗಿದ್ದು, ಗ್ರಾಮ ಮಟ್ಟದಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಆರೋಗ್ಯ ತಪಾಸಣಾ ತಂಡಕ್ಕೆ ಸಹಕರಿಸುವ ನಿಟ್ಟಿನಲ್ಲಿ ಟಾಸ್ಕ್ಪೋರ್ಸ್ ರಚಿಸಲಾಗಿದೆ. ಆರೋಗ್ಯ ತಪಾಸಣಾ ತಂಡಕ್ಕೆ ಹೆಚ್ಚುವರಿಯಾಗಿ ಆಂಬ್ಯುಲೆನ್ಸ್ಗಳು ಹಾಗೂ ಬಾಡಿಗೆ ಆಧಾರದಲ್ಲಿ ವಾಹನಗಳನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ಡಾ.ಮೋಹನ್ ಹೇಳಿದರು.
::: ಸಹಾಯವಾಣ ಕೇಂದ್ರ ಆರಂಭ :::
ಕೋವಿಡ್ ೧೯ ಎರಡನೇ ಅಲೆ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣ ಕೇಂದ್ರ ಆರಂಭಿಸಲಾಗಿದೆ.
೨೪*೭ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ. ವಿವರ ಇಂತಿದೆ. ಮಡಿಕೇರಿ ತಾಲ್ಲೂಕಿಗೆ ಪುಟ್ಟ ರಂಗನಾಥ್ (೦೮೨೭೨-೨೨೮೩೯೬), ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ವನಜಾಕ್ಷಿ (೦೮೨೭೪-೨೫೬೩೨೮), ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿಗೆ ಶಶಿಧರ (೦೮೨೭೬-೨೮೪೫೬೭) ಇವರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ. ಫೋಟೋ :: ಡಿಹೆಚ್ ಒ ಮೋಹನ್

Latest Indian news

Popular Stories