ಕೋವಿಡ್ ಸೋಂಕಿನಿ0ದ ಮೃತ; ಸಂತ್ರಸ್ಥರಿಗೆ ವಿಮಾ ಪರಿಹಾರ

ಬೀದರ ಮೇ 28 (ಕರ್ನಾಟಕ ವಾರ್ತೆ): ಜಿಲ್ಲೆಯ ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡ ಸರ್ಕಾರಿ ನೌಕರರಿಗೆ ಕೋವಿಡ್-19 ಸೋಂಕು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಸರ್ಕಾರಿ ನೌಕರನ ನೋಂದ ಸಂತ್ರಸ್ಥರಿಗೆ, ವಾರಸುದಾರರಿಗೆ ವಿಮಾ ಪರಿಹಾರ ಮೊತ್ತವನ್ನು ಮಂಜೂರು ಮಾಡಲು ಸರ್ಕಾರ ಆದೇಶಿಸಿರುತ್ತದೆ.
ಪ್ರಯುಕ್ತ ತಮ್ಮ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ನೌಕರರನ್ನು ಕೋವಿಡ್-19 ಸೋಂಕು ನಿಯಂತ್ರಿಸುವ ಕಾರ್ಯಕ್ಕೆ ನಿಯೋಜಿಸಲಾದ ನೌಕರರಿಗೆ ಕೋವಿಡ್-19 ಸೋಂಕು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದಲ್ಲಿ ಅಂತಹ ಸರ್ಕಾರಿ ನೌಕರರು ಪ್ರಾಥಮಿಕ ವರದಿ ಕೂಡಲೆ ಈ ಕಛೇರಿಗೆ ಸಲ್ಲಿಸಲು ಹಾಗೂ ಸದರಿ ನೌಕರನ ಕೋವಿಡ್-19 ಸೋಂಕಿನಿ0ದ ಮೃತಪಟ್ಟ ದೃಢೀಕೃತ ಮೂಲ ದಾಖಲಾತಿ ಪ್ರಸ್ತಾವನೆಯನ್ನು ಸಂಬ0ಧಪಟ್ಟ ಉಪ ವಿಭಾಗದ ಸಹಾಯಕ ಆಯುಕ್ತರ ಶಿಫಾರಸ್ಸಿನೊಂದಿಗೆ ಸಲ್ಲಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ಈ ಕುರಿತು ವಿಳಂಭವಾಗಿ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದಿಲ್ಲ. ಮೃತಪಟ್ಟ ಸರ್ಕಾರಿ ನೌಕರನ ನೋಂದ ಸಂತ್ರಸ್ಥರು ವಿಮಾ ಪರಿಹಾರ ಪಡೆಯದೇ ವಂಚಿತರಾದಲ್ಲಿ ಸಂಬ0ಧಪಟ್ಟ ಇಲಾಖೆ ಮುಖ್ಯಸ್ಥರಿಗೆ ನೆರ ಹೋಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Latest Indian news

Popular Stories

error: Content is protected !!