ವೈದ್ಯರ ನಡೆ ಹಳ್ಳಿಯ ಕಡೆ ವಿನೂತನ ಕಾರ್ಯಕ್ರಮ ಯಶಸ್ವಿಗೊಳಿಸೋಣ

ಬೀದರ ಮೇ 29 (ಕರ್ನಾಟಕ ವಾರ್ತೆ): ಬೀದರ ಜಿಲ್ಲೆಯಲ್ಲಿ ಕೂಡ ಮಹತ್ವದ ವೈದ್ಯರ ನಡೆ ಹಳ್ಳಿಯ ಕಡೆ ವಿನೂತನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಮೇ 28ರ ಸಂಜೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಉಲ್ಬಣಗೊಳ್ಳುತ್ತಿರುವ ಕೋವಿಡ್-19 ವೈರಾಣು ಸೋಂಕಿನ ಪ್ರಸರಣವನ್ನು ನಿಯಂತ್ರಿಸುವ ಸಲುವಾಗಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ಒಟ್ಟಾರೆ ಕೋವಿಡ್-19 ವೈರಾಣು ಸೋಂಕಿನ ಸಕ್ರಿಯ ಮತ್ತು ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಆದರೂ ಕೂಡ ಈ ವೈರಾಣು ಸಾಂಕ್ರಾಮಿಕ ಸೊಂಕನ್ನು ಸಂಪೂರ್ಣವಾಗಿ ನಿವಾರಿಸಲು ಕಟ್ಟಿನಿಟ್ಟಿನ ಕ್ರಮಗಳನ್ನು ಮುಂದುವರೆಸಬೇಕಿದೆ.
ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ವೈರಾಣು ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆಯು ಉಲ್ಬಣಗೊಳ್ಳುತ್ತಿರುವುದು ಕಂಡುಬರುತ್ತಿರುವುದರಿAದ ಗ್ರಾಮೀಣ ಪ್ರದೇಶದಲ್ಲಿ ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕಿದೆ. ಹೀಗಾಗಿ ವೈದ್ಯರ ನಡೆ, ಹಳ್ಳಿಗಳ ಕಡೆ ಎಂಬ ಕಾರ್ಯಕ್ರಮವು ಜಿಲ್ಲಾದ್ಯಂತ ಅಚ್ಚುಕಟ್ಟಾಗಿ ನಡೆಯಬೇಕು ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶ ವಾಸಿಗಳು ಕೋವಿಡ್ ಪರೀಕ್ಷೆಗೆ ಒಳಗಾಗುವಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡದಿರುವುದು ಹಾಗೂ ಕೋವಿಡ್ ಪರೀಕ್ಷಾ ಕೇಂದ್ರಗಳು ಸನಿಹದಲ್ಲಿ ಲಭ್ಯವಿಲ್ಲದಿರುವುದು ಈ ಸೋಂಕಿನ ಸಂಖ್ಯೆಯಲ್ಲಿನ ಏರಿಕೆಗೆ ಕಾರಣವಾಗಿರುವುದನ್ನು ಮನಗಾಣಲಾಗಿದೆ. ಆದುದರಿಂದ ಗ್ರಾಮೀಣ ಭಾಗದಲ್ಲಿ ವೈದ್ಯರು ಹಾಗೂ ಎ.ಎನ್.ಎಂ, ಅಂಗನವಾಡಿ ಕಾರ್ಯಕರ್ತೆಯರ ತಂಡ ಪ್ರತಿಯೊಂದು ಮನೆಗೆ ತೆರಳಿ ಸೋಂಕು ಲಕ್ಷಣವಿರುವ ವ್ಯಕ್ತಿಗಳನ್ನು ಗುರುತಿಸಿ ಅತಿ ಹೆಚ್ಚು ಸಂಖ್ಯೆಯಲ್ಲಿ ರ‍್ಯಾಟ್ ಟೆಸ್ಟಗಳನ್ನು ಮಾಡಬೇಕು. ಈ ನಿಟ್ಟಿನಲ್ಲಿ ‘ಸೋಂಕಿತರು ಎಲ್ಲಿರುವರೊ, ಅಲ್ಲೇ ಅವರನ್ನು ಗುರುತಿಸುವುದು’ ಎಂಬ ನೀತಿಯನ್ನು ಪಾಲಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅಂತಿಮ ವರ್ಷದ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಇಂಟರ್ನಶಿಪ್ ವಿದ್ಯಾರ್ಥಿಗಳು, ಬಿ.ಎಸ್.ಸಿ. ನರ್ಸಿಂಗ್, ಬಿ.ಡಿ.ಎಸ್, ಎಂ.ಡಿ.ಎಸ್ ಮತ್ತು ಆಯುಷ್ ಪದವೀಧರ ವೈದ್ಯರ ಸೇವೆಯನ್ನು ಎರವಲು ಪಡೆದು ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಒಂದೇ ಕಡೆ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಲಭ್ಯವಿದ್ದು, ಭೌತಿಕ ಪರೀಕ್ಷೆ, ಗಂಟಲು ಮಾದರಿ ಪರೀಕ್ಷೆ ನಡೆಸುವುದು ಮತ್ತು ಸ್ಥಳದಲ್ಲಿಯೇ ಸೂಕ್ತ ಚಿಕಿತ್ಸೆ ನೀಡುವುದು ಹಾಗೂ ಅವಶ್ಯಕತೆಯುಳ್ಳವರಿಗೆ ‘ವೈದ್ಯಕೀಯ ಕಿಟ್’ ಗಳನ್ನು ವಿತರಿಸುವುದು ಮೊದಲಾದ ಉದ್ದೇಶಗಳಿಗಾಗಿ ಸಂಚಾರಿ ಕ್ಲೀನಿಕ್ ಒಳಗೊಂಡಿರುವ “ವೈದ್ಯರ ನಡೆ, ಹಳ್ಳಿಗಳ ಕಡೆ” ಎಂಬ ಕಾರ್ಯಕ್ರಮದ ಉದ್ದೇಶವನ್ನು ಅರಿತು ಕಾರ್ಯಕ್ರಮ ನಡೆಸಬೇಕು ಎಂದರು.
ಗ್ರಾಮದ ಪ್ರತಿಯೊಬ್ಬ ನಾಗರಿಕರೂ ಕೋವಿಡ್-19 ತಪಾಸಣೆಗೆ ಒಳಪಡಲು ಅನುಕೂಲವಾಗುವಂತೆ “ವೈದ್ಯರ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಪ್ರಾರಂಭಿಸುವ ಪೂರ್ವದಲ್ಲಿ ಸಂಬAಧಿಸಿದ ಗ್ರಾಮ ಪಂಚಾಯಿತಿಗಳು ಈ ಕುರಿತು ಗ್ರಾಮಸ್ಥರಿಗೆ ವ್ಯಾಪಕ ಪ್ರಚಾರ ನೀಡಬೇಕು. ಕೋವಿಡ್-19 ರೋಗದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಆಯಾ ಸ್ಥಳಗಳಲ್ಲಿನ ಮನೆಗಳಿಗೆ ಭೇಟಿ ನೀಡಿ ಕೋವಿಡ್-19 ಗೆ ಸಂಬAಧಪಟ್ಟ ಸೋಂಕಿನ ಲಕ್ಷಣಗಳಿವೆಯೇ? ಎಂಬುದನ್ನು ತಪಾಸಣೆ ಮಾಡಬೇಕು. ಸೋಂಕಿತ ಲಕ್ಷಣವಿದ್ದಲ್ಲಿ ಸ್ಥಳದಲ್ಲಿಯೇ ರ‍್ಯಾಟ್ ಪರೀಕ್ಷೆಯನ್ನು ಮಾಡಬೇಕು. ರ‍್ಯಾಟ್ ಪರೀಕ್ಷೆಯು ಪಾಸಿಟಿವ್ ಇದ್ದಲ್ಲಿ ಟ್ರಯಾಜಿಂಗ್ ಮಾಡಿ ರೋಗಿಯ ಗುಣಲಕ್ಷಣದ ಮೇಲೆ, ರೋಗಿಯು ಆಸ್ಪತ್ರೆಗೆ ದಾಖಲಾಗಬೇಕೇ? ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯಬೇಕೆ ಅಥವಾ ಹೊಂ ಐಸೋಲೇಷನ್‌ನಲ್ಲಿ ಇರಬೇಕೆ? ಎಂಬುವುದರ ಬಗ್ಗೆ ಸೂಕ್ತ ನಿರ್ಧಾರವನ್ನು ತಂಡದ ವೈದ್ಯರು ತೆಗೆದುಕೊಂಡು ಸೋಂಕಿತರಿಗೆ ಮೆಡಿಕಲ್ ಕಿಟ್ ವಿತರಿಸಿ ಸೂಕ್ತ ಮಾಹಿತಿಯನ್ನು ನೀಡಬೇಕು.
ಪಾಸಿಟಿವ್ ಬಂದAತಹ ರೋಗಿಯೊಂದಿಗೆ ಸಂಪರ್ಕ ಹೊಂದಿದವರನ್ನೂ ಸಹ ಪರೀಕ್ಷೆಗೆ ಒಳಪಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಗೃಹ ಆರೈಕೆ ವ್ಯವಸ್ಥೆ ಮಾಡಲು ಅನುಕೂಲ ಹೊಂದಿರುವAತಹವರಿಗೆ ಮಾತ್ರ ಹೋಂ ಐಸೋಲೇಷನ್‌ಗೆ ಅವಕಾಶ ಕಲ್ಪಿಸಬೇಕು. ಹೋಂ ಐಸೋಲೇಷನ್ ನಲ್ಲಿರಲು ವ್ಯವಸ್ಥೆ ಇಲ್ಲದಂತಹ ಕುಟುಂಬಗಳ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಆಶಾ ಕಾರ್ಯಕರ್ತೆಯರಿಗೆ ಸೂಚನೆ: ಸ್ಥಳೀಯ ಆಶಾ ಕಾರ್ಯಕರ್ತೆಯರು ಎನ್-95 ಮತ್ತು ಇತರೆ ಪಿಪಿಇ ಸಾಮಗ್ರಿ ಧರಿಸಿ ಗ್ರಾಮದ ಪ್ರತಿಯೊಂದು ಮನೆಗೆ ಭೇಟಿ ನೀಡಿ, ವ್ಯಕ್ತಿಗಳನ್ನು ಸಂದರ್ಶಿಸಿ ಕೋವಿಡ್-19 ವೈರಾಣು ಲಕ್ಷಣಗಳಿರುವ ಬಗ್ಗೆ ಕಂಡುಬAದಲ್ಲಿ ಅವರನ್ನು ಸೂಕ್ತ ತಪಾಸಣೆಗೆ ಒಳಪಡಿಸಲು ಸಂಚಾರಿ ಕ್ಲೀನಿಕ್ ತಂಡಕ್ಕೆ ಶಿಫಾರಸ್ಸು ಮಾಡಬೇಕು ಎಂದು ತಿಳಿಸಲಾಯಿತು.
ವಾಹನ ಕಾಯ್ದಿರಿಸಿ: ಕೋವಿಡ್-19 ಸೋಂಕಿತರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋವಿಡ್ ಕೇರ್ ಸೆಂಟರ್ ಅಥವಾ ಸೂಕ್ತ ಆಸ್ಪತ್ರೆಗಳಿಗೆ ದಾಖಲಿಸಲು ಅನುಕೂಲವಾಗುವಂತೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಅಂಬುಲೆನ್ಸ್ ಅಥವಾ ಅಂಬುಲೆನ್ಸ್ ಮಾದರಿಯಲ್ಲಿ ಸಿದ್ದಪಡಿಸಿದ ವಾಹವನ್ನು ಕಾಯ್ದಿರಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜಹೀರಾ ನಸೀಮ್, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಡಿಎಚ್‌ಓ ಡಾ.ವಿ.ಜಿ.ರೆಡ್ಡಿ ಹಾಗೂ ಇನ್ನೀತರರು ಇದ್ದರು.

Latest Indian news

Popular Stories

error: Content is protected !!