ಅಗತ್ಯ ಸೇವೆಗಾಗಿ ವಿದೇಶಕ್ಕೆ ಪ್ರಯಾಣಿಸುವವರಿಗೆ 28 ದಿನಗಳ ಅಂತರದಲ್ಲಿ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ

ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ): ವಿದೇಶಕ್ಕೆ ಪ್ರಯಾಣ ಮಾಡುವ ಅಂತರಾಷ್ಟ್ರೀಯ ಕ್ರೀಡಾಪಟುಗಳು, ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಹಾಗೂ ನೌಕರಿಗಾಗಿ ತೆರಳುವವರಿಗೆ ಕೋವಿಶೀಲ್ಡ್ ಲಸಿಕೆ ಎರಡನೇ ಡೋಸ್ ಅನ್ನು 28 ದಿನಗಳ ನಂತರ ನೀಡಲಾಗುವುದು ಎಂದು ಜಿಲ್ಲಾ ಆರ್ಸಿಹೆಚ್ ಅಧಿಕಾರಿಗಳು ಪ್ರಕರಣೆಯಲ್ಲಿ ತಿಳಿಸಿದ್ದಾರೆ.
ಮೊದಲನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದಂತಹ ಎಲ್ಲರಿಗೂ ಎರಡನೇ ಡೋಸ್ ಪಡೆಯಲು 84ದಿನಗಳ ಅಂತರದ ಸಮಯವನ್ನು ನಿಗದಿ ಪಡಿಸಲಾಗಿತ್ತು. ಆದರೆ ವಿದೇಶಕ್ಕೆ ಪ್ರಯಾಣ ಮಾಡುವ ಅದರಲ್ಲೂ ವಿಶೇಷವಾಗಿ ಟೋಕಿಯೋ ಒಲಂಪಿಕ್ಸ್ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು, ವಿದೇಶದಲ್ಲಿ ಉನ್ನತ ವ್ಯಾಸಾಂಗ ಮಾಡುವ ವಿದ್ಯಾರ್ಥಿಗಳು ಹಾಗೂ ನೌಕರಿಗಾಗಿ ವಿದೇಶಕ್ಕೆ ತೆರಳುವವರಿಗೆ 28 ದಿನಗಳ ಅಂತರದಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಅಗತ್ಯ ಸೇವೆಗಾಗಿ ವಿದೇಶಕ್ಕೆ ತೆರಳುವವರು ಇದ್ದಲ್ಲಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಸಲ್ಲಿಸಿ ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

Latest Indian news

Popular Stories