ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಹೆಚ್ಚಿಸಿದ ಸರಕಾರ

ಬೆಂಗಳೂರು: ಕೊರೋನಾ ಎರಡನೇ ಅಲೆ ತಾಂಡವವಾಡಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದಷ್ಟು ಸಮಸ್ಯೆ ಉಂಟಾಗಿದೆ. ಖಾಸಗಿ ಆಸ್ಪತ್ರೆಗಳು ಪರಿಸ್ಥಿತಿಯ ಲಾಭ ಮಾಡಿಕೊಂಡು ರೋಗಿಗಳ ಕುಟುಂಬಗಳಿAದ ಹಣ ಪೀಕುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ.
ಇಂತಹ ಪರಿಸ್ಥಿತಿಯ ನಡುವೆಯೂ ಸರ್ಕಾರ ಉಲ್ಲೇಖಿಸುವ ಕೋವಿಡ್ 19 ರೋಗಿಗಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ ದರವನ್ನು ಪರಿಷ್ಕರಿಸಲಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ವಾರ್ಡ್ ಗೆ 5,200 ರೂಪಾಯಿ, ಹೆಚ್ ಡಿಯುಗಳಲ್ಲಿ 8 ಸಾವಿರ ರೂಪಾಯಿ, ವೆಂಟಿಲೇಟರ್ ಇಲ್ಲದೆ ಐಸೊಲೇಷÀನ್ ಐಸಿಯು ವಾರ್ಡ್ ಗೆ 9,750 ರೂಪಾಯಿ, ವೆಂಟಿಲೇಟರ್ ಸಹಿತ ಐಸೊಲೇಷನ್ ಐಸಿಯು ವಾರ್ಡ್ ನಲ್ಲಿ 11,500 ರೂಪಾಯಿ ದರವನ್ನು ಸರ್ಕಾರ ನಿಗದಿಪಡಿಸಿದೆ.
ಪಿಪಿಇ ಮತ್ತು ಇತರ ಅಗತ್ಯ ವೈದ್ಯಕೀಯ ವಸ್ತುಗಳು ಈ ದರದಲ್ಲಿ ಸೇರಿರಲಿವೆ. ಸರಕಾರ ನಿಗದಿಪಡಿಸಿದ್ದಕ್ಕಿಂತ ಅಧಿಕ ಬಿಲ್ ಪಡೆಯುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.

Latest Indian news

Popular Stories