Covid-19Bidar

ಜಯಂತಿ ಸರಳ ಆಚರಣೆಗೆ ತೀರ್ಮಾನ

ಬೆಂಗಳೂರು: ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ, ಬಸವ ಜಯಂತಿ ಸೇರಿದಂತೆ ವಿವಿಧ ಜಯಂತಿಗಳನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರದಿಂದ ಮೇ ತಿಂಗಳಲ್ಲಿ ನಡೆಸಲಾಗುವ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ವಿವಿಧ ಜಯಂತಿಗಳನ್ನು ಸರಳವಾಗಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ. ಈ ಸಂಬAಧ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ, ಮೇ 14 ರಂದು ಬಸವ ಜಯಂತಿ, ಮೇ 17 ರಂದು ಶ್ರೀ ಶಂಕರಾಚಾರ್ಯರ ಜಯಂತಿ ಹಾಗೂ ಮೇ 18 ರಂದು ಭಗೀರಥ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುತ್ತದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button