ಸೋಮವಾರಪೇಟೆ ತಾಲ್ಲೂಕಿನಲ್ಲಿ ಕಾವಿಡ್ ಮತ್ತೆ ಸೋಂಕಿತರ ಸಂಖ್ಯೆ ಏರಿಕೆ

ಮಡಿಕೇರಿ ಮೇ ೭ : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ೮ ಗಂಟೆ ವೇಳೆಗೆ ೫೭೩ ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
೫೨೦ ಆರ್.ಟಿ.ಪಿ.ಸಿ.ಆರ್ ಮತ್ತು ೫೩ ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಅತಿಹೆಚ್ಚು ೨೭೨ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ೨೪೬ ಆರ್.ಟಿ.ಪಿ.ಸಿ.ಆರ್ ಮತ್ತು ೨೬ ಪ್ರಕರಣಗಳು ರಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧೯೪ ಮತ್ತು ವಿರಾಜಪೇಟೆ ತಾಲೂಕಿನಲ್ಲಿ ೧೦೭ ಹೊಸ ಪ್ರಕರಣಗಳು ಕಂಡು ಬಂದಿದೆ.
::: ೨೪ ಗಂಟೆಗಳಲ್ಲಿ ೮ ಸಾವು :::
ಕೊಡಗು ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮ ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ ಒಟ್ಟು ೧೬೦ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೪೭೦ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೫,೦೫೫ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೪೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ೫೩೯೬ ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ ಒಟ್ಟು ೯೪೯೯ ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

Latest Indian news

Popular Stories